ಉದಯವಾಹಿನಿ ದೇವರಹಿಪ್ಪರಗಿ : ಗ್ರಾಮಗಳ ಅಭಿವದ್ಧಿಯಿಂದ ದೇಶದ ಸರ್ವಾಂಗೀಣ ಪ್ರಗತಿ ಸಾಧ್ಯ. ಆ ನಿಟ್ಟಿನಲ್ಲಿ ನೂತನ ಗ್ರಾ ಪಂ ಅಧ್ಯಕ್ಷ- ಉಪಾಧ್ಯಕ್ಷರು ಗ್ರಾಮಗಳ ಅಭಿವದ್ಧಿಗೆ ಆದ್ಯತೆ ನೀಡಬೇಕು ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು. ಪಟ್ಟಣದ 1008 ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಆಯೋಜಿಸಿದ್ದ ಮತಕ್ಷೇತ್ರದಲ್ಲಿನ ನೂತನವಾಗಿ ಆಯ್ಕೆಯಾದವ ಗ್ರಾ ಪಂ 2ನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ನೂತನ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷರು ನಿಷ್ಠೆಯಿಂದ ಕಾರ್ಯ ನಿರ್ವಹಿಸಿ, ತಮ್ಮ ಪಂಚಾಯತಿಗೆ ಬಂದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಮಾದರಿ ಗ್ರಾಮ ಪಂಚಾಯತಿಯಾಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕುಪಂಚಾಯತ್ ರಾಜ್ ವಿಕೇಂದ್ರೀಕರಣ ಮಾಡಿದ್ದು ಕಾಂಗ್ರೆಸ್ ಸರಕಾರ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಪಂಚಾಯತಿಯ ಅಧ್ಯಕ್ಷನಿಗೆ ಎಲ್ಲಾ ತರದ ಅಧಿಕಾರಗಳಿವೆ ಇದರಿಂದ ಗ್ರಾಮಗಳ ಅಭಿವೃದ್ಧಿಗೆ ಬಳಸಿಕೊಳ್ಳಿ.ಕೇಂದ್ರದ ಮೋದಿ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದೆ. ನಿರುದ್ಯೋಗಿ ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕಲ್ಪಿಸುವ ಭರವಸೆಯನ್ನು ಈಡೇರಿಸುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ. ನೆಮ್ಮದಿಯ ಜೀವನಕ್ಕಾಗಿ ಕಾಂಗ್ರೆಸ್ ಚುನಾವಣೆಯಲ್ಲಿ ಕೊಟ್ಟ ಭರವಸೆ ಈಡೇರಿಸಿದೆ ಗೃಹ ಜ್ಯೋತಿ, ಗೃಹ ಭಾಗ್ಯ, ಯುವ ನಿಧಿ, ಪ್ರತಿ ಕುಟುಂಬಕ್ಕೆ 10 ಕಿಲೋಗ್ರಾಂ ಉಚಿತ ಅಕ್ಕಿ ಮತ್ತು ಮಹಿಳೆಯರಿಗೆ ಉಚಿತ ಬಸ್ ಪಾಸ್ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ತಾಪಂ, ಜಿಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲುವ ಸಲುವಾಗಿ ಕ್ಷೇತ್ರದಲ್ಲಿ ಸುಮಾರು 25 ಹಿರಿಯ ಮುಖಂಡರ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮತಕ್ಷೇತ್ರದ ಗ್ರಾ ಪಂ ಅಧ್ಯಕ್ಷ ಉಪಾಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮುಖಂಡರು ಹಾಗೂ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥರಾದ ಡಾ ಪ್ರಭುಗೌಡ ಲಿಂಗದಳ್ಳಿ ಚಬನೂರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸೀರ ಅಹ್ಮದ್ ಬೇಪಾರಿ, ಹೂ ಹಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳಾಸಾಹೇಬಗೌಡ ಪಾಟೀಲ, ಮಹಿಳಾ ಘಟಕದ ಅಧ್ಯಕ್ಷರುಗಳಾದ ಸರಿತಾ ನಾಯಕ,ರಮೀಜಾ ನಧಾಪ್, ಜಿಲ್ಲಾ ಉಪಾಧ್ಯಕ್ಷರಾದ ಸಂಗನಗೌಡ ಹರನಾಳ, ರಾಜ್ಯ ಯುವ ಜಂಟಿ ಕಾರ್ಯದರ್ಶಿ ಸಂತೋಷ ದೊಡ್ಡಮನಿ, ಕಾಂಗ್ರೆಸ್ ಮುಖಂಡರುಗಳಾದ ಸುರೇಶಬಾಬು ಬಿರಾದಾರ, ಸಂಗಮೇಶ ಛಾಯಗೋಳ, ಲಲಿತಾ ದೊಡಮನಿ,ಪ್ರಕಾಶ ಗುಡಿಮನಿ, ಸುರೇಶಗೌಡ ಬಿರಾದಾರ,ಹುಯೋಗಿ ತಳ್ಳೋಳ್ಳಿ,ಸಿ ಎಸ್ ನ್ಯಾಮಣ್ಣವರ,ಮುರ್ತುಜಾ ತಾಂಬೋಳಿ, ನಜೀರ್ ಬೀಳಗಿ,ಸುನಿಲ್ ಕನಮಡಿ ಸೇರಿದಂತೆ ಹಲವು ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!