ಉದಯವಾಹಿನಿ ಬೆಂಗಳೂರು: ಮುಸ್ಲಿಮರಿಗಷ್ಟೇ ಗಂಡಸ್ತನ, ಹೆಚ್ಚಾಗಿ ಮೀಸೆ ಇರೋದಲ್ಲ, ಹಿಂದೂ ಹುಡುಗರಿಗೂ ಗಂಡಸ್ತನ ಮೀಸೆ ಇದೆ. ಹಿಂದೂ ಹುಡುಗರು ಕೂಡ ಮುಸ್ಲಿಂ ಹುಡುಗಿಯರನ್ನು ಲವ್ ಮಾಡಿ ಮತಾಂತರ ಮಾಡಬೇಕಾಗುತ್ತೆ ಎಂದು ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಮೋಹಳ್ಳಿಯ ಸಿದ್ದಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಅವರು ಇಂದು ಮಲ್ಲೇಶ್ವರಂನ ಯತಿರಾಜ ಮಠದಲ್ಲಿ ವಿಶ್ವ ಹಿಂದೂ ಪರಿಷತ್ ಏರ್ಪಡಿಸಿದ್ದ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸ್ ವಿಚಾರವಾಗಿ ನಡೆಯುತ್ತಿದ್ದ ಸಂತರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಲವ್ ಜಿಹಾದ್ ವಿಚಾರ ಪ್ರಸ್ತಾಪಿಸಿ ಮುಸ್ಲಿಮರು ಈ ವಿಚಾರವಾಗಿ ಹುಷಾರಾಗಿ ಇರಬೇಕು ಎಂದು ಎಚ್ಚರಿಸಿದ್ದಾರೆ.
ಭಾರತದ ಸ್ವಾತಂತ್ರ್ಯ ನಂತರ ಹಿಂದೂ, ಜೈನ, ಸಿಖ್, ಬೌದ್ಧರ ಜನಸಂಖ್ಯೆ ಇಳಿಕೆ ಆಗುತ್ತಿದೆ. ಮುಸ್ಲಿಂ ಹಾಗೂ ಕ್ರೈಸ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಬಲವಂತದ ಮತಾಂತರದ ಪರಿಣಾಮವನ್ನು ಸೂಚಿಸುತ್ತದೆ. ಇವರ ಸಂಖ್ಯೆ ಹೆಚ್ಚಾಗಿದ್ದೆ ಹಿಂದೂಗಳಿಂದ. ಲವ್ ಜಿಹಾದ್ ಹಾಗೂ ಮತಾಂತರದ ಮೂಲಕ ಜನಸಂಖ್ಯೆ ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಸ್ವಪ್ರೇರಣೆಯಿಂದ ಮತಾಂತರ ಆಗುವುದರಲ್ಲಿ ತಪ್ಪಿಲ್ಲ. ಬಲವಂತವಾಗಿ ಮತಾಂತರ ಮಾಡುವುದು ಅಪರಾಧ. ಹಿಂದೂಗಳು ಸಂಕುಚಿತರಲ್ಲ, ನಾನು ಸಹ ಬೈಬಲ್ ಹಾಗೂ ಕುರಾನ್ ಓದಿದ್ದೇನೆ. ಹಿಂದೂಗಳ ದೇವಸ್ಥಾನ ಹಾಗೂ ಮಂದಿರಗಳನ್ನು ಒಡೆದು ಹಾಕಿ ಆ ಧರ್ಮದ ಅನುಯಾಯಿಗಳು ನೆಲೆನಿಲ್ಲದಂತೆ ನಾಶ ಮಾಡಬೇಕು ಎಂದು ಸ್ಪಷ್ಟವಾಗಿ ಬೈಬಲ್‍ನಲ್ಲಿ ಹೇಳಿದ್ದಾರೆ. ಇದಕ್ಕೆ ಮುಸ್ಲಿಮರು ಹೊರತಾಗಿಲ್ಲ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾನೂನುಗಳನ್ನು ವಾಪಸ್ ಪಡೆಯಬಾರದು, ಇದಕ್ಕಾಗಿ ವಿಶ್ವ ಹಿಂದೂ ಪರಿಷತ್ ನಿಂದ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸಂತರ ಸಮಾವೇಶ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಆಗಲೂ ಸರ್ಕಾರ ಸ್ಪಂದಿಸದೇ ಕಾನೂನುಗಳನ್ನು ರದ್ದುಗೊಳಿಸಿದರೆ ಮಂಗಲ ಪಾಂಡೆಯಂತೆ ಸಿಡಿದೆದ್ದು ರಕ್ತಕ್ರಾಂತಿಯಂಥ ಹೋರಾಟ ಮಾಡಬೇಕಾದೀತು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!