ಉದಯವಾಹಿನಿ ಬೆಂಗಳೂರು: ಸ್ವತಂತ್ರ ಬಂದು 76ನೇ ವರ್ಷ ಸಾಗುತ್ತಿದ್ದರು ನಾಡಿನ ಕಾರ್ಯ ನಿರತ ಪತ್ರಕರ್ತರಿಗೆ ಹಿಂದಿಗೂ ಸಹ ಮೂಲಭೂತ ಸೌಕರ್ಯ ದೊರೆಯದಿರುವುದು ದುರದೃಷ್ಟಕರ ಸರ್ಕಾರ ಮತ್ತು ಸಾರ್ವಜನಿಕರ ಮಧ್ಯ ಸಂಪರ್ಕ ಸೇತುವೆಯಾಗಿ ಪ್ರಾಣದ ಹಂಗನ್ನು ತೊರೆದು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರುಗಳಿಗೆ ಕನಿಷ್ಠ ಸೇವಾ ಭದ್ರತೆಯೂ ಇಲ್ಲದೆ ಸೂಕ್ತರಕ್ಷಣೆಯು ಇಲ್ಲದಂತಾಗಿದೆ ಅಕ್ಯುಡೇಶನ್ ನೆಪದಲ್ಲಿ ಪತ್ರಕರ್ತರಗಳ ಮಧ್ಯ ತಾರತಮ್ಯ ಎಸಗುತ್ತಿರುವ ಸರ್ಕಾರದ ಇದಕ್ಕಾಗಿ ಸರ್ಕಾರದಿಂದ ಸಿಗುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾತಾಶನ ಬಸ್ ಪಾಸ್ ವಿಮಾ ಸೌಲಭ್ಯ ಹೀಗೆ ಹಲವಾರು ಬೇಡಿಕೆಗಳನ್ನು ಈಡೇರಿಕೆಗಾಗಿ 14ರಂದು ಅಂದರೆ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಪ್ರತಿಭಟನೆಯ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ತಿಳಿಸಿದ್ದಾರೆ ಅಲ್ಲದೆ ಈ ಪ್ರತಿಭಟನೆಯಲ್ಲಿ ರಾಜ್ಯದ ಸಮಸ್ತ ನಾಡಿನ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಜಿಲ್ಲಾ ತಾಲೂಕು ಪದಾಧಿಕಾರಿಗಳು ಮತ್ತು ಪತ್ರಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಹ ಬಂಗ್ಲೆ ಮಲ್ಲಿಕಾರ್ಜುನ ತಿಳಿಸಿದ್ದಾರೆ
