ಉದಯವಾಹಿನಿ,ಶಿಡ್ಲಘಟ್ಟ : ಇತ್ತೀಚೆಗೆ ಮಕ್ಕಳಲ್ಲಿ ಮಾಧ್ಯಮಗಳ ಪ್ರಭಾವವು ನಕಾರಾತ್ಮಕವಾಗಿ ಪರಿಣಾಮ ಬೀರುತ್ತಿದ್ದು, ಆ ರೀತಿ ಆಗದಂತೆ ಪೋಷಕರು ತಡೆಯಬೇಕು. ಸಿಕ್ಕ ಸಮಯದಲ್ಲಿ ಪಠ್ಯವನ್ನು ಓದಿ ಮನನ ಮಾಡಿಕೊಳ್ಳುವುದರ ಜೊತೆಗೆ ಅಂದಿನ ಪಾಠವನ್ನು ಅಂದೇ ಅರ್ಥೈಸಿಕೊಳ್ಳುವ ಬಗ್ಗೆ ಒಲವು ಮೂಡಿಸಬೇಕು ಎಂದು ಶಿಕ್ಷಕ ರುದ್ರೇಶಮೂರ್ತಿ ತಿಳಿಸಿದರು.
ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ನೋಟ್‌ಪುಸ್ತಕಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಕ್ಕಳ ಕಲಿಕೆಯಲ್ಲಿ ಸಮಯಪಾಲನೆಯು ಪೂರಕವಾದುದು. ಸರಿಯಾದ ವೇಳಾಪಟ್ಟಿ ಮೂಲಕ ಎಲ್ಲಾ ವಿಷಯಗಳಿಗೂ ಸರಿಯಾದ ಆದ್ಯತೆಯನ್ನು ನೀಡಿ ಆಸಕ್ತಿಯಿಂದ ಕಲಿತರೆ ಸಾಧನೆಯು ಸುಲಭಸಾಧ್ಯವಾಗುತ್ತದೆ. ಪೋಷಕರು ಮಕ್ಕಳ ಕಲಿಕಾಸಾಧನೆಗೆ ಬೆನ್ನುಲುಬಾಗಿ ನಿಲ್ಲಬೇಕು. ಅಗತ್ಯ ಸಂದರ್ಭದಲ್ಲಿ ಸೂಕ್ತ ಮಾರ್ಗದರ್ಶನ ನೀಡಬೇಕಾದ ಅಗತ್ಯವಿದೆ ಎಂದರು.ಶಿಕ್ಷಕ ಎ.ಬಿ.ನಾಗರಾಜು ಮಾತನಾಡಿ, ಪ್ರತಿ ಮಗುವಿನ ಸಾಧನೆಯ ಹಿಂದೆ ಪೋಷಕರ ಪರಿಶ್ರಮ, ತ್ಯಾಗ ಅಡಗಿರುತ್ತದೆ. ಕಲಿಕೆಗೆ ಬಡತನವು ಅಡ್ಡಿಯಾಗದು. ಮಕ್ಕಳ ಪ್ರತಿಭೆಗೆ ಸೂಕ್ತವಾದ ವೇದಿಕೆಯನ್ನು ಕಲ್ಪಿಸಿ ಪ್ರೋತ್ಸಾಹಿಸಿದರೆ, ಮಗುವಿನಲ್ಲಿರುವ ಅರಿವು ಜಾಗೃತಗೊಂಡು ಉತ್ತಮ ಸಾಧನೆ ಮಾಡಲು ಸಹಾಯಕವಾಗುತ್ತದೆ ಎಂದರು.
 ಹಾಲು ಉತ್ಪಾದಕರ ಸಹಕಾರ ಸಂಘದಿಂದ ಶಾಲೆಗೆ ಬ್ಯಾಂಡ್‌ಸೆಟ್, ಪ್ಲಾಸ್ಟಿಕ್ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಎಂಪಿಸಿಎಸ್ ನಿರ್ದೇಶಕ ವೆಂಕಟೇಗೌಡ ಅವರು ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಪುಸ್ತಕ, ಲೇಖನಸಾಮಗ್ರಿಗಳನ್ನು ವಿತರಿಸಿದರು. ಗ್ರಾಮಪಂಚಾಯಿತಿ ಸದಸ್ಯ ಎ.ಸತೀಶ್, ಎಂ.ನಾಗರಾಜು, ನಾರಾಯಣಸ್ವಾಮಿ, ಶಿವಶಂಕರಪ್ಪ, ಮಾಜಿ ಸದಸ್ಯ ಎನ್.ಅಶ್ವತ್ಥಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥಗೌಡ, ಕಾರ್ಯದರ್ಶಿ ಗಿರೀಶ್, ನಿರ್ದೇಶಕರಾದ ವೆಂಕಟೇಗೌಡ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ  ಶಿಕ್ಷಕಿ ತಾಜೂನ್ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!