
ಉದಯವಾಹಿನಿ,ಪೀಣ್ಯ ದಾಸರಹಳ್ಳಿ : ನಿಸರ್ಗ ಶಾಲಾ ಆವರಣದಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಜೃಂಭಣೆ ಮತ್ತು ಅರ್ಥಪೂರ್ಣವಾಗಿ ಹಾಜರಿಸಲಾಯಿತು.
ನಿಸರ್ಗ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮಾಜಿ ನಗರ ಪಾಲಿಕೆ ಸದಸ್ಯ ಹಾಗೂ ತೋಟಗಾರಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್ ಎನ್ ಗಂಗಾಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಲನಚಿತ್ರ ಸಾಹಿತಿ ಹಾಗೂ ನಿರ್ದೇಶಕ ವಿ ನಾಗೇಂದ್ರ ಪ್ರಸಾದ್ ಶಾಲಾ ಮಕ್ಕಳಿಂದ ಪತಸಂಚಲನದೊಂದಿಗೆ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಬಾಬಾ ಸಾಹೇಬ್ ಅಂಬೇಡ್ಕರ್ ರವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿ ಗಳಿಗೆ ನಾಗೇಂದ್ರ ಪ್ರಸಾದ್ ಕರೆ ನೀಡಿದರು. ಎಚ್ ಎನ್ ಗಂಗಾಧರ್ ಮಾತನಾಡಿ ಸಮಸ್ತ ನಾಡಿನ ಜನತೆಗೆ ತುಂಬು ಹೃದಯದ ಸ್ವತಂತ್ರ ದಿನಾಚರಣೆಯ ಶುಭಾಶಯಗಳು ಕೋರಿದರು ಹಾಗೆಯೇ ಸಾವಿರಾರು ಜನಗಳ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಲಭಿಸಿತು ಎಂದು ಗಂಗಾಧರ್ ಅವರು ಸ್ವಾತಂತ್ರ್ಯೋತ್ಸವದ ಶುಭ ಕೋರಿದರು ನಂತರ ಎಲ್ಲಾ ಶಾಲಾ ಮಕ್ಕಳಿಗೆ ಮತ್ತು ಪೋಷಕರಿಗೆ ಸಿಹಿ ಹಂಚಿದರು.
ಶಾರೀರಿಕ ಶಿಕ್ಷಕ ಚಂದ್ರಶೇಖರ್ ಮಕ್ಕಳಿಂದ ಸಾಂಸ್ಕೃತಿಕ ಶಾರೀರಿಕ ಪ್ರದರ್ಶನ ನಡೆಸಿ ಕೊಟ್ಟರು. ಮುಖ್ಯೋಪಾಧ್ಯಾಯನಿ ಭಾರತಿ ಸೇರಿದಂತೆ ಶಿಕ್ಷಕ ಶಿಕ್ಷಕಿಯರು ಪೋಷಕರು ನಾಗರಿಕ ಬಂಧು ಭಗನಿಯರು ಭಾಗವಹಿಸಿದ್ದರು.
