
ಉದಯವಾಹಿನಿ,ಕೋಲಾರ :- ಜಿಲ್ಲೆ ಮತ್ತು ತಾಲೂಕಿನ ನರಸಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ರವರು ಧ್ವಜಾರೋಹಣವನ್ನು ನೆರವೇರಿಸಿದರು.
ಅನೇಕ ವೀರಸೇನಾನಿಗಳು ಬ್ರಿಟಿಷರ ವಿರುದ್ಧ ಸತತವಾಗಿ ಹೋರಾಟದ ಫಲವಾಗಿ ಭಾರತಕ್ಕೆ 1947 ಆಗಸ್ಟ್ 15 ರಂದು ಸ್ವಾತಂತ್ರ್ಯ ದೊರಕಿತು. ನಮಗೆ ಸಿಕ್ಕಿದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವುದು ನಮ್ಮ ಕರ್ತವ್ಯವಾಗಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೃಷ್ಣಪ್ಪರವರು ತಿಳಿಸಿದರು.
*ಮುಖ್ಯವಾಗಿ ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಪ್ರೌಡ ಶಾಲೆಯ ಮಕ್ಕಳಲ್ಲಿ 7ನೇ ಮತ್ತು 10ನೇ ತರಗತಿ ಹಾಗೂ ಪ್ರಥಮ ಪಿಯುಸಿ ಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಎಂ.ಟಿ ಬಿ.ಶ್ರೀನಿವಾಸ್, ಅಪ್ರೋಜ್ ಬಾನು ಮತ್ತು ಶಾಲೆಯ ಎಸ್ ಡಿ ಎಂ ಸಿ ಯ ಸದಸ್ಯರು ಬಹುಮಾನಗಳನ್ನು ವಿತರಣೆ ಮಾಡಿದರು*
ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ಅನೇಕ ದೇಶಭಕ್ತಿಯನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.
ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಹಿಸಿದ್ದ ಎಲ್ಲಾ ವಿದ್ಯಾಥಿಗಳಿಗೆ ಕೋಲಾರ ಶಾಸಕರಾದ ಕೊತ್ತೂರು ಜಿ.ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಜಾಲಿ ಬಾನು, ಭಾನು ಪ್ರಕಾಶ್, ಓಂ ಪ್ರಕಾಶ್ ರವರು ಬಹುಮಾನಗಳನ್ನು ವಿತರಿಸಿದರು.ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಬಿ ಸೊಣ್ಣೆಗೌಡ ರವರು ಮಾತನಾಡಿ ಸಾಕಷ್ಟು ಹೋರಾಟದ ನಂತರ ಬ್ರಿಟೀಷರಿಂದ ಸಿಕ್ಕ ಸ್ವಾತಂತ್ರ್ಯದ ಮೌಲ್ಯ ದೇಶದ ಪ್ರತಿ ಪ್ರಜೆಗೂ ತಿಳಿದಿದೆ. ಇದಕ್ಕಾಗಿ, ದೇಶಕ್ಕಾಗಿ ಮಡಿದ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸುತ್ತಾ ನಾವೆಲ್ಲಾ ಹೆಮ್ಮೆ ಗೌರವದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸೋಣ ಎಂದರು. ಇದೇ ಸಂದರ್ಭದಲ್ಲಿ ನವೀನ್ ರವರು ಮಕ್ಕಳಿಗೆ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಶ್ರೀಮತಿ ಪದ್ಮಾವತಿ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ ಸೊಣ್ಣೆಗೌಡ, ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಾಲರಾದ ಗೋಪಿನಾಥ್, ನಾರಾಯಣ್ವಾಮಿ, ಗ್ರಾಮ ಪಂಚಾಯತಿ ಸದಸ್ಯ ಕೆ ಇ ಬಿ ಚಂದ್ರು. ಮುನಿರಾಜು, ಗೋಪಿ, ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
