ಉದಯವಾಹಿನಿ,ಬೆಂಗಳೂರು: ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡವನ್ನು ನಗರದ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ನಿರ್ಮಿಸಲಾಗಿದೆ.
ಶುಕ್ರವಾರ ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಕಟ್ಟಡವನ್ನು ಉದ್ಘಾಟಿಸಿದರು.
3ಡಿ ಅಂಚೆ ಕಚೇರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ನೋಡಲು ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ. ನಮ್ಮ ರಾಷ್ಟ್ರದ ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ. ಇದು ಸ್ವಾವಲಂಬಿ ಭಾರತದ ಆತ್ಮವನ್ನು ಒಳಗೊಂಡಿದೆ. ಅಂಚೆ ಇಲಾಖೆಯನ್ನು ಪೂರ್ಣಗೊಳಿಸುವಲ್ಲಿ ಶ್ರಮಿಸಿದವರಿಗೆ ಅಭಿನಂದನೆಗಳು’ ಎಂದು ಆ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
