
ಉದಯವಾಹಿನಿ,ಶಿಡ್ಲಘಟ್ಟ: ಪ್ರತಿ ತಿಂಗಳ ಮೂರನೇ ಶನಿವಾರದಂದು ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತಾ ಸಭೆಯನ್ನು ಹಮ್ಮಿಕೊಳ್ಳಲಾಗುತ್ತದೆ. ಅದೇ ರೀತಿ ಶನಿವಾರ ಸಹ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ಶಿಡ್ಲಘಟ್ಟ ಬೆಸ್ಕಾಂ ನಗರ/ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಭು ತಿಳಿಸಿದ್ದಾರೆ.
ಆ.19 ರಂದು ಮದ್ಯಾನ್ಹ 3.00 ಗಂಟೆಯಿಂದ ಸಂಜೆ 05:00ರ ವರೆಗೆ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತೆಯ ಬಗ್ಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ವಿದ್ಯುತ್ ಸುರಕ್ಷತಾ ಸಭೆಯನ್ನು ಶಿಡ್ಲಘಟ್ಟ ಬೆವಿಕಂ ಕಛೇರಿಯಲ್ಲಿ ಹಮ್ಮಿಕೊಂಡಿದ್ದು, ಶಿಡ್ಲಘಟ್ಟ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಸಭೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ರೈತ ಸಂಘದ ಮುಖಂಡರು, ಶಿಡ್ಲಘಟ್ಟ ತಾಲ್ಲೂಕಿನ ಎಲ್ಲಾ ಗ್ರಾಹಕರು ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಕೊಳ್ಳಬೇಕೆಂದು ಹಾಗೂ ವಿದ್ಯುತ್ ಸುರಕ್ಷತೆಯ ಬಗ್ಗೆ ತಿಳಿದುಕೊಳ್ಳಲು ತಿಳಿಸಿದರು.
