
ಉದಯವಾಹಿನಿ, ಯಾದಗಿರಿ: ಪ್ರೋ. ಕೃಷ್ಣಪ್ಪನವರ ಸ್ಥಾಪಿತವಾದ ದಲಿತ ಸಂಘರ್ಷ ಸಮಿತಿಯ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ನಿಂಗಣ್ಣ ಗೋನಾಲ್, ಜಿಲ್ಲಾ ಸಂಘಟನಾ ಸಂಚಾಲಕರಾಗಿ ನಾಗರಾಜ ಓಕುಳಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷರಾದ ಎಂ ಗುರುಮೂರ್ತಿ ಅವರು ಆದೇಶ ಪತ್ರ ನೀಡಿದರು.
ಬೆಂಗಳೂರಿನ ಗಾಂಧಿ ಭವನದಲ್ಲಿ ಕರೆಯಲಾಗಿದ್ದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಘಟನೆಗೆ ಒತ್ತು ನೀಡುವ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಕೆಲಸ ಮಾಡುವಂತೆ ರಾಜ್ಯಾಧ್ಯಕ್ಷರಾದ ಎಂ ಗುರುಮೂರ್ತಿ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ವಿವಿಧ ಜಿಲ್ಲಾ ದಲಿತ ಮುಖಂಡರು ಉಪಸ್ಥಿತರಿದ್ದರು.
