ಉದಯವಾಹಿನಿ, ನವದೆಹಲಿ : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೊಸ ಎಕ್ಸ್‍ಪ್ರೆಸ್ ವೇ ನಿರ್ಮಿಸುವ ಯೋಜನೆ ಇದೆ ಎಂದು ಕೇಂದ್ರ ಭೂ ಹೆದ್ದಾರಿ ಭೂ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಗಡ್ಕರಿ, ಕನ್ಯಾಕುಮಾರಿ ಮತ್ತು ಕಾಶ್ಮೀರದವರೆಗೆ ಎಕ್ಸ್‍ಪ್ರೆಸ್ ವೇ ನಿರ್ಮಿಸಿ ಎರಡನ್ನೂ ಒಗ್ಗೂಡಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡಲಿದೆ ಎಂದಿದ್ದಾರೆ.
ಮೊದಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಿದೆ. ಇದರ ಸಾಧಕ-ಬಾಧಕಗಳ ಬಗ್ಗೆ ಅವಲೋಕನ ನಡೆಸಿ ನಂತರ ಎಕ್ಸ್‍ಪ್ರೆಸ್ ವೇ ನಿರ್ಮಾಣ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಪುಟದ ಸಹದ್ಯೋಗಿಗಳ ಜೊತೆ ಚರ್ಚೆ ಮಾಡಲಾಗುವುದು. ಇದು ದೊಡ್ಡ ಮೊತ್ತದ ಯೋಜನೆಯಾಗಲಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
