ಉದಯವಾಹಿನಿ, ನವದೆಹಲಿ,: ಐಪಿಸಿ, ಸಿಆರ್‍ಪಿಸಿ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಾಯಿಸುವ ಮೂರು ಪ್ರಸ್ತಾವಿಕ ಕಾನೂನುಗಳನ್ನು ಪರಿಶೀಲಿಸಲು ಕೇಂದ್ರ ಗೃಹ ವ್ಯವಹಾರಗಳ ಸ್ಥಾಯಿ ಸಮಿತಿ ಪರಿಶೀಲನೆಗೆ ಸೂಚನೆ ನೀಡಿರುವ ರಾಜ್ಯಸಭಾ ಸಭಾಪತಿ ಜಗದೀಪ್ ಧನ್ಕರ್ ಅವರು ಮೂರು ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಸೂದೆಗಳನ್ನು ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಮಸೂದೆಯನ್ನು ಲೋಕಸಭೆಯಲ್ಲಿ ಆ.11 ರಂದು ಅವರು ಮಂಡಿಸಿದ್ದರು. ಒಮ್ಮೆ ಅಂಗೀಕರಿಸಿದ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯನ್ನು ಬದಲಿಸುತ್ತವೆ.
