ಉದಯವಾಹಿನಿ ದೇವರಹಿಪ್ಪರಗಿ: ಪಟ್ಟಣದ ಹೆಸ್ಕಾಂ ಕಚೇರಿ ಆವರಣದಲ್ಲಿ ಗ್ರಾಹಕರ ಹಾಗೂ ರೈತರ ಕುಂದು ಕೊರತೆಗಳ ಚರ್ಚೆ ಸಭೆ ಎಇಇ ವಿಜಯಕುಮಾರ ಆರ್ ಹವಾಲ್ದಾರ ಅವರ ನೇತೃತ್ವದಲ್ಲಿ ನಡೆಯಿತು.ಪಟ್ಟಣದ ಹೆಸ್ಕಾಂ ಕಚೇರಿ ಆವರಣದಲ್ಲಿ ಶನಿವಾರದಂದು ಹೆಸ್ಕಾಂ ಸಹಾಯಕ ಎಂಜಿನಿಯರ್ ವಿಜಯಕುಮಾರ ಆರ್ ಹವಾಲ್ದಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿದ್ಯುತ್ ಗ್ರಾಹಕರ ಹಾಗೂ ರೈತರ ಸಂವಾದ ಸಭೆಯಲ್ಲಿ ಕುಂದುಕೊರತೆ ಹಾಗೂ ಸಮಸ್ಯೆಗಳನ್ನು ಆರಿಸಲಾಯಿತು.ತಾಲ್ಲೂಕಿನ ಹಲವು ಗ್ರಾಮಗಳಿಂದ ಆಗಮಿಸಿದ್ದ ಗ್ರಾಹಕರು ತಮ್ಮ ದೂರುಗಳನ್ನು ಸಲ್ಲಿಸಿದರು. ನಂತರ ಅಧಿಕಾರಿಗಳು, ಸಮಸ್ಯೆಗೆ ಸ್ಪಂದಿಸಿ ಶೀಘ್ರ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಹೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಗ್ರಾಹಕರು ಹಾಗೂ ರೈತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!