ಉದಯವಾಹಿನಿ ನಾಗಮಂಗಲ: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ *ನಾಗರ ಪಂಚಮಿ* ಪ್ರಯುಕ್ತ  ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಹೋಮ, ಅಭಿಷೇಕ ಮತ್ತು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ  ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!