
ಉದಯವಾಹಿನಿ ಯಾದಗಿರಿ : “ಕಾಯಕಯೋಗಿ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವವನ್ನು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 07 ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕಾಯಕಯೋಗಿ ಶ್ರೀ ನುಲಿಯ ಚಂದಯ್ಯ ಅವರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಕಾಯಕಯೋಗಿ ಶ್ರೀ ನುಲಿಯ ಚಂದಯ್ಯ ಅವರ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ-ಕಾರ್ಯಗಳನ್ನು ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ಜವಾಬ್ದಾರಿಯಿಂದ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿದಂತೆ ಎಲ್ಲಾ ರೀತಿಯ ಸೌಕರ್ಯವನ್ನು ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು. ಜಯಂತಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಶಾಲಾ ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಯಾ ಸಂಘಟನೆಗಳಿಂದ ಏರ್ಪಡಿಸಲಾಗುವ ಮೆರವಣಿಗೆ, ಮಾರ್ಗದ ಕುರಿತು ಪೂರ್ವಭಾವಿಯಾಗಿ ಸಂಬಂಧಿಸಿದ ಇಲಾಖೆಗೆ ತಿಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸಮಾಜದ ಮುಖಂಡರಾದ ಯಲ್ಲಪ್ಪ ಭಜಂತ್ರಿ ವನದುರ್ಗ, ಬಸವರಾಜ ಗಂಗಿನಾಳ, ಕಾಶಪ್ಪ ಭಜಂತ್ರಿ ಯಲಸತ್ತಿ, ಯಂಕಮ್ಮ ಆನಂದ ಭಜಂತ್ರಿ ಗೋಪಾಳಪುರ, ಬಸವರಾಜ ಭಜಂತ್ರಿ ಕುಂಬಾರಪೇಟ, ಚಂದ್ರಕಾಂತ ಭಜಂತ್ರಿ ರುಕ್ಮಾಪುರ, ಬಸವರಾಜ ಭಜಂತ್ರಿ ಶಿವಪುರ, ಆಂಜನೇಯ ಭಜಂತ್ರಿ ಮಸ್ಗನಳ್ಳಿ, ಭೀಮರಾಯ ಭಜಂತ್ರಿ ಸುರಪುರ, ತಿಪ್ಪಣ್ಣ ಭಜಂತ್ರಿ ಸುರಪುರ, ಆಶಪ್ಪ ಭಜಂತ್ರಿ ಅರಿಕೇರಾ ಬಿ, ಸಾಬಣ್ಣ ಭಜಂತ್ರಿ ಯಾದಗಿರಿ, ಹಣಮಂತ ಭಜಂತ್ರಿ ಯಾದಗಿರಿ, ಆನಂದ ಭಜಂತ್ರಿ ಗೋಪಾಳಪುರ, ಖಂಡಪ್ಪ ಭಜಂತ್ರಿ ಸುರಪುರ ಸೇರಿದಂತೆ ಇನ್ನಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
