ಉದಯವಾಹಿನಿ ದೇವರಹಿಪ್ಪರಗಿ: ಸ್ವಚ್ಛತೆಯು ಮೊದಲು ನಮ್ಮ ಹೃದಯದಿಂದ  ಪ್ರಾರಂಭವಾಗಬೇಕು. ಪಟ್ಟಣದ ಅಭಿವೃದ್ಧಿಗಾಗಿ ‘ಸ್ವಚ್ಛ ಮನಸ್ಸು, ಸ್ವಚ್ಛ ಪರಿಸರ’ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ಭಾರತೀಯರಾದ ನಮ್ಮ ಕರ್ತವ್ಯವಾಗಿದೆ ಎಂದು ತಹಶೀಲ್ದಾರ್ ಪ್ರಕಾಶ ಸಿಂದಗಿ ಹೇಳಿದರು.

ಪಟ್ಟಣದಲ್ಲಿ ಮಂಗಳವಾರದಂದು ಸ್ಮಶಾನ ಹಾಗೂ ರುದ್ರ ಭೂಮಿಗಳಿಗೆ ಭೇಟಿ ನೀಡಿ ಪಟ್ಟಣ ಪಂಚಾಯಿತಿಯಿಂದ ನಡೆದ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಟ್ಟಣ ಪಂಚಾಯತಿಯ ಸಿಬ್ಬಂದಿ ವರ್ಗ ಕಳೆದ ವಾರ ಜೆಸಿಬಿ ಯಂತ್ರದಿಂದ ಗಿಡಗಂಟಿಗಳನ್ನು ಕಿತ್ತು ಸ್ವಚ್ಛಗೊಳಿಸಿದ್ದಾರೆ. ಇದರಿಂದ ಅಂತಿಮ ಯಾತ್ರೆಯಲ್ಲಿ ಪಾಲ್ಗೊಳ್ಳುವ ಜನರಿಗೆ ಅನುಕೂಲವಾಗಲಿದೆ. ಸ್ಮಶಾನ ಹಾಗೂ ರುದ್ರ ಭೂಮಿಯಲ್ಲಿ ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ,ಹೈ ಮಾಸ್ಕ್ ದುರಸ್ತಿಗೆ ಸೂಚನೆ ನೀಡಿ ರಾತ್ರಿ ಹೊತ್ತಿನಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸಲು ತಿಳಿಸಲಾಯಿತು. ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆಯ ಬಗ್ಗೆ ಗಮನಹರಿಸಲು ಸಿಬ್ಬಂದಿ ವರ್ಗಕ್ಕೆ ತಿಳಿಸಿದ್ದೇನೆ. ಪಟ್ಟಣದ ಸೌಂದರ್ಯಕ್ಕಾಗಿ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಉತ್ಪತ್ತಿಯಾಗುವ ಕಸಗಳನ್ನು ವಿಂಗಡಣೆ ಮಾಡಿ ಸರಿಯಾದ ರೀತಿಯಲ್ಲಿ ಅವುಗಳನ್ನು ವಿಸರ್ಜಿಸಬೇಕು ಎಲ್ಲೆಂದರಲ್ಲಿ ಪಟ್ಟಣದ ನಿವಾಸಿಗಳು  ಹಾಗೂ ಅಂಗಡಿಕಾರರು ಕಸ ಎಸೆಯಬಾರದು ಪಟ್ಟಣದ ಸ್ವಚ್ಛತೆಗೆ ಸಿಬ್ಬಂದಿ ವರ್ಗದ ಜೊತೆ ಕೈ ಜೋಡಿಸಲು ಕರೆ ನೀಡಿದರು.ಇದೇ ಸಂದರ್ಭದಲ್ಲಿ ಪ ಪಂ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ಕಿರಿಯ ಅಭಿಯಂತರರಾದ ಗುರುರಾಜ ಬಿರಾದಾರ, ಕಿರಿಯ ಆರೋಗ್ಯ ನಿರೀಕ್ಷಕರಾದ ಫಿರೋಜ್ ಮುಲ್ಲಾ ಸೇರಿದಂತೆ ಪ.ಪಂ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!