ಉದಯವಾಹಿನಿ ಕೆ.ಆರ್.ಪೇಟೆ: ಶಾಲಾ ಕೊಠಡಿಗಳಲ್ಲಿ ಲಕ್ಷಾಂತರ ಮಕ್ಕಳ ಭವಿಷ್ಯ ರೂಪುಗೊಳ್ಳುತ್ತದೆ ಎಂದು ಶಾಸಕ ಹೆಚ್.ಟಿ.ಮಂಜು ತಿಳಿಸಿದರು. ಅವರು ತಾಲ್ಲೂಕಿನ ಸಂತೇಬಾಚಹಳ್ಳಿ ಗ್ರಾಮದಲ್ಲಿ ನೂತನ ಶಾಲಾ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ಶಾಲಾ ಕೊಠಡಿಗಳು ದೇವಾಲಯಗಳಿದ್ದಂತೆ ದೇಗುಲದಲ್ಲಿ ಭಗವಂತ ನೂರಾರು ಭಕ್ತರ ಆಶೋತ್ತರಗಳನ್ನು ಈಡೇರಿಸುವಂತೆ ಕೊಠಡಿಗಳಲ್ಲಿ ಶಿಕ್ಷಕರು ಎಳೆಯ ಮಕ್ಕಳ ಉಜ್ವಲವಾದ ಭವಿಷ್ಯಕ್ಕೆ ಮುನ್ನುಡಿ ಬರೆಯುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಶಾಲೆಯನ್ನು ದೇವಾಲಯವೆಂದು ತಿಳಿದು ಭಕ್ತಿಯಿಂದ ಗುರುಗಳಿಗೆ ನಮಿಸಿ ಶಿಕ್ಷಣ ಪಡೆಯಬೇಕು. ಗುತ್ತಿಗೆದಾರರು ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಇಲ್ಲ. ಮುಂದಿನ ತಲೆಮಾರುಗಳಿಗೂ ಕಟ್ಟಡಗಳು ಶಾಶ್ವತವಾಗಿ ಉಳಿಯುವ ಕೆಲಸವಾಗಬೇಕು. ಗ್ರಾಮಸ್ಥರು ಹಾಗೂ ಎಸ್‌ಡಿಎಂಸಿ ಸದಸ್ಯರುಗಳ ಕಟ್ಟಡದ ಕಾಮಗಾರಿಯ ಬಗ್ಗೆ ಮೇಲ್ವಿಚಾರಣೆ ವಹಿಸಿ ನಿರ್ವಹಣೆ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಗಳಮAಜುನಾಥ್, ಎಸ್ ಡಿಎಂಸಿ ಅಧ್ಯಕ್ಷೆ ರೇಣುಕ, ಕೃಷಿ ಪತ್ತಿನ ಸಹಕರಸಂಘದ ಅಧ್ಯಕ್ಷ ಎಸ್.ಹೆಚ್.ಕೃಷ್ಣ, ನಿರ್ದೇಶಕರಾದ ಹರೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಹಿರಿಯ ಉಪಾದ್ಯಕ್ಷ ಆನಂದ್‌ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್ ಕಾರ್ಯದರ್ಶಿ ಲಕ್ಷ್ಮಣಗೌಡ, ಸದಸ್ಯ ಮಂಜೇಗೌಡ, ಶರತ್, ಮಂಜುಳ, ದೇವರಾಜು, ಉಪನ್ಯಾಸಕ ಪ್ರಭು, ಸಂತೇಬಾಚಹಳ್ಳಿ ಹೋಬಳಿ ಜೆಡಿಎಸ್ ಅಧ್ಯಕ್ಷ ರವಿಕುಮಾರ್, ಸೇರಿದಂತೆ ಹಲವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!