ಉದಯವಾಹಿನಿ, ನವದೆಹಲಿ: ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ರೂಪಾಂತರ ಕಾಣಿಸಿಕೊಳ್ಳುತ್ತಿರುವ ನಡುವೆ ಸೋಂಕು ಪತ್ತೆ ಪರೀಕ್ಷೆ ಹೆಚ್ಚು ಮಾಡುವಂತೆ ಕೇಂದ್ರ ಸರ್ಕಾರ, ರಾಜ್ಯಗಳಿಗೆ ಸೂಚನೆ ನೀಡಿದೆ.ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯಗಳಿಗೆ ಈ ನಿರ್ದೇಶನ ನೀಡಲಾಗಿದ್ದು, ಕೋವಿಡ್ ಸೋಂಕಿನ ಮೇಲೆ ಕಾಲ ಕಾಲಕ್ಕೆ ನಿಗಾ ಇಡುವಂತೆ ಸೂಚಿಸಲಾಗಿದೆ.
ಅನಾರೋಗ್ಯ ಮತ್ತು ತೀವ್ರತರವಾದ ಉಸಿರಾಟ ಮತ್ತು ತೀವ್ರವಾದ ಉಸಿರಾಟದ ಸೋಂಕು ಪ್ರಕರಣಗಳು ಕಂಡು ಬಂದರೆ ರಾಜ್ಯ ಸರ್ಕಾರಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಕರೋನಾ ಸೋಂಕಿನ ಹೊಸ ರೂಪಾಂತರಗಳ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕು ಪರೀಕ್ಷೆ ಮತ್ತು ಜೀನೋಮ್ ಅನುಕ್ರಮ ಹೆಚ್ಚಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ.
