ಉದಯವಾಹಿನಿ, ಮಸ್ಕಿ: ಕಲ್ಯಾಣ ಕರ್ನಾಟಕ ಭಾಗದ ಕಲಾವಿದರಿಗೆ ಗುರುತೀನ ಚೀಟಿ ವಿತರಿಸುವುದರ ಜೊತೆಗೆ ಕಲಾವಿದರ ಮಾಶಸನ ಹೆಚ್ಚಿಸಬೇಕೆಂದು ಕಲ್ಯಾಣ ಕರ್ನಾಟಕ ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷ ವಿಜಯ ಕುಮಾರ ಸೋನಾರ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಜಿಲ್ಲಾ ಒಕ್ಕೂಟದ ವತಿಯಿಂದ ಗುರುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಈ ಭಾಗದ ಕಲಾವಿದರನ್ನು ಕಡೆಗಣಿಸಲಾಗುತ್ತಿದೆ. ಆದರೆ ಈಗಿನ ಸರ್ಕಾರ ಕಲಾವಿದರ ಬೇಡಿಕೆಗಳನ್ನು ಈಡೇರಿಸಿ ಕಲ್ಯಾಣ ಕರ್ನಾಟಕ ಭಾಗದ ಕಲಾವಿದರ ನೇರವಿಗೆ ಧಾವಿಸಲಿದೆ ಎಂಬ ವಿಶ್ವಾಸ ಇದೆ ಎಂದರು. ಈ ಭಾಗದ ಕಲಾವಿದರ ಹಿತಕ್ಕಾಗಿ ಕಲ್ಯಾಣ ಕರ್ನಾಟಕ ಒಕ್ಕೂಟ ಪ್ರಾರಂಭವಾಗಿ ಎರಡು ವರ್ಷ ಕಳೆಯುತ್ತಿದೆ. ಈ ಹಿಂದೆ ಆಡಳಿತದಲ್ಲಿ ಸರ್ಕಾರಕ್ಕೆ ಈ ಭಾಗದ ಕಲಾವಿದರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿತ್ತು. ಆದರೆ ಸರ್ಕಾರ ಸ್ಪಂದನೆ ಮಾಡಲಿಲ್ಲ. ಆದರೆ ಈಗ ಆಡಳಿತದಲ್ಲಿರುವ ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಲಿದೆ ಎಂದರು.
ಕ.ಕ.ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಎಸ್. ಅಂಗಡಿ ಮಾತನಾಡಿ ಕಲ್ಯಾಣ ಕರ್ನಾಟಕದ ಕಲಾವಿದರ ಪರ ದನಿಯಾಗಿ ಹತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಸರ್ಕಾರ ಈ ಬಾರಿ ಕೊಪ್ಪಳದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಾವಿದರ ಹಿತಕ್ಕಾಗಿ ಹಂಪಿ ಉತ್ಸವ ಮಾದರಿಯಲ್ಲಿ ಕಾರ್ಯಕ್ರಮವನ್ನು ಆಯೋಜಿನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಭಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವರ್ಷಪೂರ್ತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೇ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕಲಾವಿದರ ಟ್ರಸ್ಟಗಳನ್ನು ರಚಿಸಲಾಗಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಈವರೆಗೆ ಟ್ರಸ್ಟ್ ಸ್ಥಾಪನೆ ಮಾಡಿಲ್ಲ ಸಕಾರ ಕೂಡಲೇ ಟ್ರಸ್ಟ್ ಸ್ಥಾಪನೆ ಮಾಡಲು ಮುಂದಾಗಬೇಕು ಇದರಿಂದ ನಮಗೆ ನ್ಯಾಯ ಸಿಕ್ಕಂತಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಅಮರೇಶ ಹಸಮಕಲ್, ನಾರಾಯಣಪ್ಪ, ಚಿನ್ನಪ್ಪ ಸೇರಿದಂತೆ ಇತರರು ಇದ್ದರು.

 

Leave a Reply

Your email address will not be published. Required fields are marked *

error: Content is protected !!