ಉದಯವಾಹಿನಿ, ಕೆ.ಆರ್.ಪೇಟೆ: ಚಿರತೆ ದಾಳಿಗೆ ಹಸುವಿನ ಕರು ಬಲಿಯಾಗಿರುವ ಘಟನೆ ತಾಲ್ಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಕಸಬಾ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದ ರೈತ ಪುಟ್ಟರಾಜು ಅವರಿಗೆ ಸೇರಿದ ಹಸುವಿನ ಕರುವನ್ನು ತಮ್ಮ ಕೊಟ್ಟಿಗೆಯಲ್ಲಿ ಕಟ್ಟಿಹಾಕಲಾಗಿತ್ತು. ಮಂಗಳವಾರ ತಡರಾತ್ರಿ ಚಿರತೆ ದಾಳಿ ಮಾಡಿ ಸುಮಾರು ನಲವತ್ತು ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಹಸುವಿನಕರುವನ್ನು ತಿಂದು ಹಾಕಿದೆ. ಪುಟ್ಟರಾಜುರವರ ಮನೆಯ ಬೀದಿಯಲ್ಲಿ ರಾತ್ರಿವೇಳೆ ಸಂಚರಿಸಲು ಬೀದಿ ದೀಪದ ಕೊರತೆಯಿದ್ದು ಕತ್ತಲು ಆವರಿಸಿದ ಕಾರಣ ಚಿgಚಿve ದಾಳಿ ಮಾಡಿದ್ದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ಆ ಬೀದಿಗೆ ಬೀದಿದೀಪಗಳನ್ನು ಅಳವಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಚಿರತೆ ದಾಳಿಯಿಂದ ಭಯಭೀತರಾಗಿರುವ ಜನತೆ ಬೋನನ್ನು ಇಟ್ಟು ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಯವರಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!