ಉದಯವಾಹಿನಿ, ಕೊಲ್ಹಾರ: ಚಂದ್ರನ ಅಂಗಳಕ್ಕೆ ಚಂದ್ರಯಾನ 3 ಯಶಸ್ವಿಯಾಗಿ ಇಳಿಯುವ ಮೂಲಕ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ಹೊಸ ದಾಖಲೆ ಬರೆದಿದೆ ಎಂದು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹೇಳಿದರು.
ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಮೇಲಿಳಿದ ಪ್ರಯುಕ್ತ ಪಟ್ಟಣದ ಅಗಸಿ ಹತ್ತಿರ ಇರುವ ದ್ಯಾಮವ್ವ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು, ಭಾರತ ದೇಶದ ಚಾರಿತ್ರಿಕ ದಿನವಿದು ಇಡೀ ವಿಶ್ವವೇ ಭಾರತದತ್ತ ಬೆರಗುಗಣ್ಣಿನಿಂದ ನೋಡುವಂತೆ ನಮ್ಮ ಹೆಮ್ಮೆಯ ವಿಜ್ಞಾನಿಗಳು ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಿ ವಿಶ್ವದ ಪ್ರಥಮ ದೇಶ ಎಂಬ ದಾಖಲೆಗೆ ಪಾತ್ರವಾಗುವಂತೆ ವಿಜ್ಞಾನಿಗಳು ಮಾಡಿದ್ದಾರೆ.
ಬಲಿಷ್ಠ ನಾಯಕತ್ವದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೇತೃತ್ವದಲ್ಲಿ ಇಂತಹ ಅದ್ಭುತ ಸಾಧನೆ ಸಾಧ್ಯವಾಗಿದೆ ಎಂದು ಅವರು ಹೇಳಿದರು.ಸಂಭ್ರಮಾಚರಣೆ: ಚಂದ್ರನ ಅಂಗಳಕ್ಕೆ ಚಂದ್ರಯಾನ-3 ಯಶಸ್ವಿಯಾಗಿ ಇಳಿದ ಪ್ರಯುಕ್ತ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ನೇತೃತ್ವದಲ್ಲಿ ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಹತ್ತಿರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಪಟ್ಟಣದ ಹಿರಿಯರು, ಕಾರ್ಯಕರ್ತರು ಮತ್ತಿತರು ಉಪಸ್ಥಿತರಿದ್ದರು.
