(ವರದಿಗಾರರು ಅಯ್ಯಣ್ಣ ಮಾಸ್ಟರ್ ಉದಯ ವಾಹಿನಿ ಪೀಣ್ಯ ದಾಸರಹಳ್ಳಿ)
ಉದಯವಾಹಿನಿ, ಪೀಣ್ಯ ದಾಸರಹಳ್ಳಿ : ಸಮೀಪದ ಲಗ್ಗೆರೆಯಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿಯಲ್ಲಿ ಒಂದಾದ ಶಾಲಾ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ದೃಷ್ಟಿಯಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಕೊಡುವ ಯೋಜನೆ ಒಳ್ಳೆಯ ಯೋಜನೆ ಎಂದು ಲಗ್ಗೆರೆ ನಾರಾಯಣ ಸ್ವಾಮಿ ಬಣ್ನಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ 1ನೇ ತರಗತಿಯಿಂದ 10 ನೇ ತರಗತಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡುವ ಯೋಜನೆಗೆ ಲಗ್ಗೆರೆ ವಾರ್ಡಿನ ಕಾಂಗ್ರೆಸ್ ಪ್ರಭಾವಿ ನಾಯಕ ಲಗ್ಗೆರೆ ನಾರಾಯಣ ಸ್ವಾಮಿ ಬಿಬಿಎಂಪಿ ಪ್ರೌಢ ಶಾಲೆಯ ಮತ್ತು ಸರ್ಕಾರಿ ಶಾಲೆಯ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾ ಧ್ಯಾಯ ಗೋವಿಂದರಾಜು, ಶಿಕ್ಷಕಿ ಪುಷ್ಪಾವತಿ, ಎಸ್.ಡಿ.ಎಂ.ಸಿ ಸದಸ್ಯ ನಿರಂಜನ್, ಕೇಶವಮೂರ್ತಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
