ಉದಯವಾಹಿನಿ, ದೇವರಹಿಪ್ಪರಗಿ: ಪಟ್ಟಣದ ನಾಡಕಛೇರಿ ಹತ್ತಿರ ಇರುವ ಕಂಪ್ಯೂಟರ್ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಶೀಲ್ದಾರ್ ಪ್ರಕಾಶ ಸಿಂದಗಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಜಾತಿ ಹಾಗೂ ಆದಾಯ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವಾಗ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಆನ್ಲೈನ್ ಪೋರ್ಟಲ್ ನಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಆದರೆ ಹಲವು ಕಂಪ್ಯೂಟರ್ ಕೇಂದ್ರಗಳಲ್ಲಿ ನಿಗದಿತ ದಾಖಲೆಗಳನ್ನು ಸ್ಕ್ಯಾನ್ ಮಾಡದೆ ಕಳಿಸುತ್ತಿರುವುದರಿಂದ ಜಾತಿ ಹಾಗೂ ಆದಾಯ ಪ್ರಮಾಣ ಪತ್ರಗಳು ರಿಜೆಕ್ಟ್ ಆಗುತ್ತವೆ. ಆದ ಕಾರಣ ಪಟ್ಟಣದ ಹಲವು ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ನೀಡಿ ಸರಿಯಾದ ದಾಖಲೆಗಳ ಮೂಲಕ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ತಿಳಿಸಿದ್ದೇನೆ. ಇನ್ನು ಮುಂದೆ ಸರಿಯಾದ ದಾಖಲೆಗಳ ಮೂಲಕ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಇಲ್ಲದಿದ್ದರೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದೇನೆ. ಹಳ್ಳಿಯಿಂದ ವಿದ್ಯಾರ್ಥಿಗಳು ಹಾಗೂ ಪಾಲಕರು ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುತ್ತಾರೆ, ಆದರೆ ಅಂಗಡಿಕಾರರು ಸರಿಯಾಗಿ ದಾಖಲಾತಿಗಳನ್ನು ಅಪ್ಲೋಡ್ ಮಾಡದೇ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವುದನ್ನು ನನ್ನ ಗಮನಕ್ಕೆ ಬಂದ ಕಾರಣ ಕೆಲ ಅಂಗಡಿಗಳಿಗೆ ಭೇಟಿ ನೀಡಲಾಯಿತು. ಸಾರ್ವಜನಿಕರಿಗೆ ಸಮಸ್ಯೆ ಆಗದ ಹಾಗೆ ಕಾರ್ಯನಿರ್ವಹಿಸಲು ಹೇಳಿದ್ದೇನೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರಾದ ಎಸ್.ಎ.ಗುಮಾಸ್ತೆ, ತಲಾಟಿ ಅನೀಲ ರಾಠೋಡ ಸೇರಿದಂತೆ ಹಲವಾರು ಜನ ಉಪಸ್ಥಿತರಿದ್ದರು.
