ಉದಯವಾಹನಿ, ಬಂಗಾರಪೇಟೆ : ರಾಜ್ಯಸರ್ಕಾರ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಮಹತ್ವಪೂರ್ಣದಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ, ಆರ್ಥಿಕ ಉನ್ನತಿಯ ದೃಷ್ಟಿಯಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಇದನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ 30-8-2023 ರಂದು ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದಕಾರಣ ಕಂದಾಯ ಇಲಾಖೆ ಒಳಗೊಂಡಂತೆ ಇತರ ಸರ್ಕಾರಿ ಸ್ವಾಮ್ಯದ ಎಲ್ಲಾ ಇಲಾಖೆಯ ಅಧಿಕಾರಿಗಳು ಜವಾಬ್ದಾರಿಗಳನ್ನು ವಿಕೇಂದ್ರೀಕರಣ ಮಾಡಿಕೊಳ್ಳುವ ಮುಖಾಂತರ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕ ಎಸ್. ಎನ್. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
: ಪಟ್ಟಣದ ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯ ಸಂಕೀರ್ಣದ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಜನತೆಯ ಕ್ಮಾಭ ಶ್ರೇಯೋಭಿವೃದ್ಧಿಗಾಗಿ ಸರ್ಕಾರ 5 ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮಿ ಯೋಜನೆಗಳ ಮೂಲಕ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರರೂಗಳನ್ನು ನೀಡಲಾಗುವುದು. ಇದಕ್ಕೆ ಸಂಬಂಧಪಟ್ಟಂತೆ ಜುಲೈ 19-8-2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಪ್ರಸ್ತುತ ರಾಜ್ಯದ್ಯಂತ ಲಕ್ಷಾಂತರ ಜನರು ಅರ್ಜಿಗಳನ್ನು ನೋಂದಣಿ ಮಾಡಿದ್ದಾರೆ ಎಂದರು.
31-8-2023 ರಂದು ಗೃಹಲಕ್ಷ್ಮಿ ಯೋಜನೆ ಅನುಷ್ಠಾನ: ರಾಜ್ಯಾದ್ಯಂತ ಅರ್ಜಿ ಸಲ್ಲಿಸುವ ಎಲ್ಲಾ ಮಹಿಳೆಯರಿಗೆ ಬೃಹತ್ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮೂಲಕ ಹಣಸಂದಾಯ ಮಾಡಲಾಗುವುದು.
ಈ ಸಂದರ್ಭದಲ್ಲಿ ನೋಡಲ್ ಅಧಿಕಾರಿ ಶ್ರೀನಿವಾಸ್. ಸಿ ಡಿ ಪಿ ಓ. ಮುನಿರಾಜ್. ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯ. ಇ ಓ ರವಿಕುಮಾರ್. ಪುರಸಭೆ ಮುಖ್ಯ ಅಧಿಕಾರಿ ಮೀನಾಕ್ಷಿ. ರಾಜಸ್ವ ನಿರೀಕ್ಷಕ ಅಜಯ್. ಸಕ್ಪಾಲ್. ಚೇತನ್. ಪಿಡಿಓ ನಾರಾಯಣಪ್ಪ. ಶಂಕರ್. ಚಿತ್ರ. ವಾಣಿ. ಸರಸ್ವತಿ. ಚಂದ್ರು. ಶಂಕರ್. ಮಧುಚಂದ್ರ. ಇತರರು ಉಪಸ್ಥಿತರಿದ್ದರು.

error: Content is protected !!