ಉದಯವಾಹಿನಿ, ಅಫಜಲಪುರ: ಸಕ್ಕರೆ ಕಾರ್ಖಾನೆಗಳಿಂದ ಬರಬೇಕಾದ ಬಾಕಿ ಹಣ ನೀಡಬೇಕೆಂದು ಕಬ್ಬು ಬೆಳೆಗಾರರು ಅಫಜಲಪುರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಡಿಸುತ್ತಿರುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಇಂದು 4 ದಿನಕ್ಕೆ ಕಾಲಿಟ್ಟಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಮಂತ ಬಿರಾದಾರ ಮಾತನಾಡಿ, ಕಳೆದ ವರ್ಷ ಪ್ರಾಂತ ರೈತ ಸಂಘದಿಂದ ಧರಣಿ ಸತ್ಯಾಗ್ರಹ ಮಾಡಲಾಗಿತ್ತು.ಆಗ ಸರ್ಕಾರದ ಜನಪ್ರತಿನಿಧಿಗಳು ಭರವಸೆ ನೀಡಿದರು.ಆದರೆ ಈವರೆಗೆ ಭರವಸೆ ಈಡೇರಿಸಿಲ್ಲ.ಹೀಗಾಗಿ ಬೇಡಿಕೆಗಳನ್ನು ಈಡೇರಿಸುವವರೆಗೂ ಸತ್ಯಗ್ರಹವನ್ನು ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ. ಶೀಘ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಹಣ ಕೊಡಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ರಾಜುಗೌಡ ಪಾಟೀಲ್ , ಗುರು ಚಾಂದಕವಟೆ, ಗೌಡಪ್ಪ ಗೌಡ ಪಾಟೀಲ್ ಯಲ್ಲಪ್ಪ ನೆಲೋಗಿ ಅರ್ಜುನ ಕುಂಬಾರ್ ಅಮೃತಗೌಡ ಪಾಟೀಲ್ ಭೀಮರಾಯ ಗೌರ್ ಬಸವರಾಜ್ ಹೇರೂರು ಸಂತೋಷ್ ಪಾಟೀಲ್ ಸೇರಿದಂತೆ ಅನೇಕರಿದ್ದರು.

Leave a Reply

Your email address will not be published. Required fields are marked *

error: Content is protected !!