
ಉದಯವಾಹಿನಿ, ಸವದತ್ತಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಉಗರಗೋಳದ ವ್ಯಾಪ್ತಿಯಲ್ಲಿ ಬರುವ ಉಪಕೇಂದ್ರ ಗೊರವನಕೊಳ್ಳ ಗ್ರಾಮದಲ್ಲಿ ನೂತನವಾಗಿ ಮಂಜೂರಾದ ಉಪಕೇಂದ್ರದ ಕಟ್ಟಡದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ದ ಅಡಿಗಲ್ಲು ಸಮಾರಂಭಕ್ಕೆ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು.
ಮುಂದುವರೆದು ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರಿಗೆ ಉಚಿತ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳು ಒದಗಿಸಲು ಇಂತಹ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬಹಳಷ್ಟು ಸಹಕಾರಿಯಾಗಿದೆ ಗ್ರಾಮದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಸದೃಢ ಆರೋಗ್ಯ ಮುಖ್ಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯ ಹೊಂದಲು ಸಲಹೆ ನೀಡಿದರು,
