ಉದಯವಾಹಿನಿ, ನವದೆಹಲಿ : ಕೇಂದ್ರ ಸರ್ಕಾರದ ವಿವಿಧ ಸೇವೆಗೆ ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 28 ರಂದು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಆಗಸ್ಟ್ 28 ರಂದು ಪಂಜಾಬ್‌ನಲ್ಲಿ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ.
ಗಡಿ ಭದ್ರತಾ ಪಡೆಯ ಪಂಜಾಬ್ ಫ್ರಾಂಟಿಯರ್, “ಉದ್ಯೋಗಗಳ ಮೂಲಕ ಸಬಲೀಕರಣ. 8 ನೇ ಹಂತದ ನೇಮಕಾತಿ ಪತ್ರಗಳ ವಿತರಣೆ ಪಂಜಾಬ್, ಜಲಂಧರ್ ಸೇರಿದಂತೆ 45 ರೋಜ್ ಗಾರ್ ಮೇಳದಲ್ಲಿ ಹರ್ದೀಪ್ ಸಿಂಗ್ ಪುರಿ ವಿತರಿಸಿಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ನೇಮಕಾತಿ ಪತ್ರ ವಿತರಿಸಿ ಮಾತನಾಡಲಿದ್ದಾರೆ.
ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಜುಲೈ 22 ರಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 70,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ್ದರು. ಆಜಾದಿ ಕಾ ಅಮೃತ್ ಮಹೋತ್ಸವ’ದ ಸಂದರ್ಭದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಕೆಲಸ ಮಾಡುತ್ತಿರುವಾಗ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ದೊಡ್ಡ ಗೌರವ, ಈ ದೇಶದ ಜನತೆ ಭಾರತವನ್ನು ಅಮೋಘವಾಗಿ ರೂಪಿಸುವ ಸಂಕಲ್ಪವನ್ನು ಕೈಗೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ದೇಶ” ಎಂದು ಪ್ರಧಾನಿ ಮೋದಿ ಕಿವಿ ಮಾತು ಹೇಳಿದ್ದರು.
