ಉದಯವಾಹಿನಿ, ನವದೆಹಲಿ: ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೂರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಮುಂದಿನ ವಿಧಾನಸಭೆಯಲ್ಲಿ ಬಿಜೆಪಿಗೆ ಸೋಲು ಖಚಿತ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ದಲಿತ ಯುವಕನನ್ನು ಹೊಡೆದು ಕೊಲೆ ಮಾಡಲಾಗಿದೆ. ಗೂಂಡಾಗಳು ಯುವಕನ ತಾಯಿಯನ್ನು ಬಿಟ್ಟಿಲ್ಲ. ಬಿಜೆಪಿ ಮಧ್ಯಪ್ರದೇಶವನ್ನು ದಲಿತ ದೌರ್ಜನ್ಯಗಳ ಪ್ರಯೋಗಶಾಲೆಯನ್ನಾಗಿ ಮಾಡಿದೆ ಎಂದು ಆರೋಪಿಸಿದ್ದಾರೆ.ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ದಲಿತರ ಮೇಲಿನ ಅಪರಾಧಗಳ ಪ್ರಮಾಣವು ರಾಷ್ಟ್ರೀಯ ಸರಾಸರಿಗಿಂತಲೂ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.
