ಉದಯವಾಹಿನಿ, ಶಿಡ್ಲಘಟ್ಟ : ತಾಲೂಕಿನ ಬಶೆಟ್ಟಹಳ್ಳಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹುದ್ದೆಗೆ ನೇರ ನೇಮಕಾತಿ ನಡೆಯಲಿದೆ. ಬಿ.ಎಸ್ಸಿ, ಬಿ.ಕಾಂ, ಎಂ.ಎಸ್ಸಿ, ಎಂ.ಕಾಂ, ಎಂ.ಬಿ.ಎ ಪದವೀಧರರಾಗಿದ್ದು, ಕೃಷಿ ಅಥವಾ ಕೃಷಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಒಂದು ಅಥವಾ ಎರಡು ವರ್ಷ ಸೇವಾ ಅನುಭವ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಆಸಕ್ತರು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಆಗಸ್ಟ್ 28ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಗಂಗಾ ಭವಾನಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ 9035744933, 9945268349, 9481585674 ಸಂಪರ್ಕಿಸಲು ಶ್ರೀ ಗಂಗಾ ಭವಾನಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ನಿರ್ದೇಶಕ ಮಂಡಳಿ ಕೋರಿದೆ.

Leave a Reply

Your email address will not be published. Required fields are marked *

error: Content is protected !!