( ವರದಿಗಾರರು ಅಯ್ಯಣ್ಣ ಮಾಸ್ಟರ್ ಉದಯ ವಾಹಿನಿ ಪೀಣ್ಯ ದಾಸರಹಳ್ಳಿ )
ಉದಯವಾಹಿನಿ,ಪೀಣ್ಯ ದಾಸರಹಳ್ಳಿ : ಚಂದ್ರಯಾನ-3 ಮಿಷನ್ ಮೂಲಕ ಅಂತರಿಕ್ಷದಲ್ಲಿ ಭಾರತದ ವೈಜ್ಞಾನಿಕ ಸಾಧನೆಯ ಶಂಖನಾದ ಮೊಳಗಿಸಿ, ದೇಶದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಇಸ್ರೋ ವಿಜ್ಞಾನಿಗಳಾದ ಮನೀಶ್ ಚಾವ್ಲಾ, ಕಲ್ಪನಾ ಅರವಿಂದ್, ಆಕಾಂಕ್ಷ ಭಾರದ್ವಾಜ್, ಮಾಜಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕ್ಷೇತ್ರದ ಶಾಸಕ ಎಸ್.ಮುನಿರಾಜು ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಶೋಭಾ ಅಪಾರ್ಟ್ಮೆಂಟ್ ಅಧ್ಯಕ್ಷ ಚಂದ್ರಶೇಖರ್ ಚಲಗೇರಿ, ಸೂರಜ್ ಪೌಂಡೇಶನ್ ಸಂಸ್ಥಾಪಕಿ ಸುಜಾತ ಮುನಿರಾಜು, ಚೊಕ್ಕಸಂದ್ರ ವಾರ್ಡ್ ಮಾಜಿ ಪಾಲಿಕೆ ಸದಸ್ಯ ಸಿ.ಎಂ.ನಾಗರಾಜ್, ಗಂಗರಾಜು, ವಿನೋದ್ ಗೌಡ, ಶೋಭಾ ಅಪಾರ್ಟ್ಮೆಂಟ್ ನಿವಾಸಿಗಳು ಉಪಸ್ಥಿತರಿದ್ದರು.
