ಉದಯವಾಹನಿ,ಜೈಪುರ: ಕೋಟಾದಲ್ಲಿ ಭಾನುವಾರ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೀಟ್‌ಗೆ ಅಧ್ಯಯನ ನಡೆಸುತ್ತಿದ್ದ ಮಹಾರಾಷ್ಟ್ರದ ಆವಿಷ್ಕರ್ ಶುಭಾಂಗಿ ಹಾಗೂ ಬಿಹಾರದ ಆದರ್ಶ್ ಆತ್ಮಹತ್ಯೆ ಮಾಡಿಕೊಂಡವರು. ಪ್ರಸಕ್ತ ವರ್ಷ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 22ಕ್ಕೇರಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಮುಂಜಾಗ್ರತೆಯಾಗಿ ಒಂದು ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸದಂತೆ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
