
ಉದಯವಾಹಿನಿ ಕುಶಾಲನಗರ: ತಾಲ್ಲೂಕಿನ ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಲ್ಲಿ ನಿವೃತ್ತಗೊಂಡ ಶಿಕ್ಷಕರನ್ನು ಆತ್ಮೀಯವಾಗಿ
ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು. ಇದೇ ವೇಳೆ ವರ್ಗಾವಣೆಯಿಂದ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಿಂದ ಬೇರೆ ಶಾಲೆಗಳಿಗೆ ತೆರಳಿದ ಶಿಕ್ಷಕರಿಗೆ ಬೀಳ್ಕೊಟ್ಟು, ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಿಗೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ವಹಿಸಿ ಮಾತನಾಡಿ, ಇಂತಹ ಕಾರ್ಯಕ್ರಮವು ಶಿಕ್ಷಕರಲ್ಲಿ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವುದರೊಂದಿಗೆ ಶೈಕ್ಷಣಿಕ ಚಿಂತನೆಗೆ ಕ್ರಿಯಾಶೀಲ ಮತ್ತು ಪ್ರೇರೇಪಣೆ ನೀಡುತ್ತದ ಎಂದರು.ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್.ಪಲ್ಲೇದ್ ಮಾತನಾಡಿದರು.ಚಿತ್ರಕಲಾ ಸಂಪನ್ಮೂಲ ಶಿಕ್ಷಕ ಉ.ರಾ.ನಾಗೇಶ್, ಆಶಯ ನುಡಿಗಳನಾಡಿದರು. ಶಾಲೆಯ ಮುಖ್ಯ ಶಿಕ್ಷಕ ಎಸ್.ಎ.ಯೋಗೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು,
ಕಾರ್ಯಕ್ರಮದ ಸಂಘಟಕರೂ ಆದ ಕೂಡಿಗೆ ಸಿ ಆರ್ ಪಿ ಕೆ.ಶಾಂತಕುಮಾರ್, ಕುಶಾಲನಗರ ಸಿ ಆರ್ ಪಿ ಎಸ್.ವಿ. ಸಂತೋಷ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕರಿಗೆ ಸನ್ಮಾನ; ನಿವೃತ್ತಗೊಂಡ ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸಿ.ಎಂ.ಸುಲೋಚನ, ಚಿಕ್ಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಚ್.ಬಿ.ಗೌರಮ್ಮ ಹಾಗೂ ವರ್ಗಾವಣೆಗೊಂಡ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನೀಲಪ್ಪ ಮಡಿವಾಳ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯದರ್ಶಿ ದಯಾನಂದ ಪ್ರಕಾಶ್, ಸಂಪನ್ಮೂಲ ವ್ಯಕ್ತಿಗಳಾದ ಟಿ.ವಿ.ಶೈಲಾ, ಸಿ ಆರ್ ಪಿ ಪ್ರೇಮ, ವಿವಿಧ ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು. ಶಿಕ್ಷಕಿ ಕೆ.ಗಾಯತ್ರಿ ನಿರ್ವಹಿಸಿದರು.
