ಉದಯವಾಹಿನಿ,ಬೆಂಗಳೂರು : ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕೆನ್ನುವ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನು ವಿರೋಧಿಸಿ ರೈತರು ಕೆಆರ್‍ಎಸ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡು ಕಾವೇರಿಯಿಂದ ಪ್ರತಿದಿನ 25 ನೀರು ಕ್ಯೂಸೆಕ್ಸ್ ನೀರು ಬಿಡಬೇಕೆಂದು ಒತ್ತಾಯಿಸಿತ್ತು. ಅದನ್ನು ಪರಿಷ್ಕರಣೆ ಮಾಡಿದ ನೀರು ನಿರ್ವಹಣಾ ಮಂಡಳಿ ಮೊದಲು 15 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಆದೇಶಿಸಲಾಗಿತ್ತು. ಅದು ಸಾಧ್ಯವಿಲ್ಲ ಎಂದು ರಾಜ್ಯಸರ್ಕಾರ ಪಟ್ಟು ಹಿಡಿದಿದ್ದರಿಂದಾಗಿ ಆ.31ರವರೆಗೆ 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸೂಚಿಸಲಾಗಿತ್ತು. nಈ ಕುರಿತಂತೆ ಮೇಲ್ಮನವಿ ಸಲ್ಲಿಸಿದ್ದ ತಮಿಳುನಾಡು ಸರ್ಕಾರದ ಅಹವಾಲನ್ನು ಪರಿಶೀಲಿಸಿದ ಕಾವೇರಿ ನೀರು ನಿರ್ವಹಣಾ ಸಮಿತಿ ನಿನ್ನೆ ಮತ್ತೊಂದು ತೀರ್ಪು ನೀಡಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಸೂಚಿಸಿತ್ತು. ಇದರ ವಿರುದ್ಧ ಕರ್ನಾಟಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇನ್ಮನವಿ ಸಲ್ಲಿಸಿದ್ದು, ಅದರ ಸಭೆ ಇಂದು ಮಧ್ಯಾಹ್ನ ನಡೆಯಲಿದೆ. ಅಲ್ಲಿ ನೀರು ನಿರ್ವಹಣಾ ಸಮಿತಿಯ ತೀರ್ಪನ್ನು ಮರು ಪರಿಶೀಲಿಸಲಾಗುತ್ತಿದೆ.
ಈ ನಡುವೆ ಕೆಆರ್‍ಎಸ್ ನಲ್ಲಿ ಭೂತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೆಆರ್‍ಎಸ್ ಬಳಿ ಹೋರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು ರಾಜ್ಯಸರ್ಕಾರ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್ ನೀರು ಬಿಡುವುದಾಗಿ ಒಪ್ಪಿಕೊಂಡಿದೆ. ಸಮಿತಿ 5 ಸಾವಿರ ಕ್ಯೂಸೆಕ್ಸ್ ನೀರನ್ನು 15 ದಿನ ಬಿಡುವಂತೆ ಸೂಚನೆ ನೀಡಿದೆ.
