ಉದಯವಾಹಿನಿ, ಕುಶಾಲನಗರ: ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ನೇರುಗಳಲೆ ಇವರ ಆಶ್ರಯದಲ್ಲಿ ನೇರುಗಳಲೆಯ ಶಾಲಾ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಫಾತೀಮಾ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಇವರಿಗೆ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಸ್ಪಂದನಾ ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದರು. ದೈಹಿಕ ಶಿಕ್ಷಣ ಶಿಕ್ಷಕರು ತರಬೇತಿ ನೀಡಿದ್ದರು. ಶಾಲೆಯ ಶಿಕ್ಷಕ ವೃಂದದವರು ಮಾರ್ಗದರ್ಶನ ನೀಡಿದರು.
