ಉದಯವಾಹಿನಿ,ಚಿಂಚೋಳಿ: ಕೆಲ ದಿನಗಳಲ್ಲಿ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರೀಯಾಂಕ್ ಖರ್ಗೆಯವರು ತಾಲ್ಲೂಕಿನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದಾರೆ ಆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ,ಮಹಿಳೆಯರಿಗೆ,ವಿಕಲಚೇತನರ ಅಹವಾಲು ಸ್ವೀಕರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಸೇವಕ ರಮೇಶ ಯಾಕಾಪೂರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆ ಹೊರಡಿಸಿದ ಅವರು,ತಾಲ್ಲೂಕಿನಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವರು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರೀಯಾಂಕ್ ಖರ್ಗೆಯವರು ಹಮ್ಮಿಕೊಳ್ಳುತ್ತಿರುವ ಸಾರ್ವಜನಿಕರ ಅಹವಾಲು ಸ್ವೀಕರ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಮಹಿಳೆಯರಿಗೆ ವಿಕಲಚೇತನರ ಅಹವಾಲು ಸ್ವೀಕರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಿದ್ದಲ್ಲಿ ಸದರಿ ಕಾರ್ಯಕ್ರಮಕ್ಕೆ ಅರ್ಥವಿರುತ್ತದೆ ಇಲ್ಲಾದಿದ್ದರೆ ಕಾರ್ಯಕ್ರಮ ನಿರುಪಯುಕ್ತ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ತಹಸೀಲ್ದಾರ್ ರವರಿಗೆ ಪತ್ರ ಬರೆದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!