
ಜೇವರ್ಗಿ: ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಜಗದ್ಗುರು ತೋಂಟದಾರ್ಯ ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳಿಗೆ, ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಅಲ್ಲಂಪ್ರಭು ಪಾಟೀಲ್ ಮಾಜಿ ವಿಧಾನ ಪರಿಷತ್ ಸದಸ್ಯರಾದ ಉಪಾಧ್ಯಕ್ಷರಾದ ಶ್ರೀ ಶಿವನಗೌಡ ಪಾಟೀಲ ಹಂಗರಗಿ, ಕಾರ್ಯದರ್ಶಿಗಳಾದ ಶ್ರೀ ವಿಜಯಕುಮಾರ್ ಮಾಲಗಿತ್ತಿ ಹಾಗೂ ಪ್ರೌಢ ಶಾಲೆಯ ಮುಖ್ಯಗುರುಗಳಾದ ಶ್ರೀ ಲಿಂಗರಾಜ್ ಹಂಚಿನಾಳ ಮತ್ತು ಎಲ್ಲಾ ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿಯವರು ಹರ್ಷವ್ಯಕ್ತಪಡಿಸಿದ್ದಾರೆ.
