ಉದಯವಾಹಿನಿ ಮಸ್ಕಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪುರಸಭೆ ಇಲಾಖೆಯ ಸಹಯೋಗದಲ್ಲಿ ಬುಧುವಾರ ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮಕ್ಕೆ ಶಾಸಕ ಆರ್.ಬಸನಗೌಡ ತುರವಿಹಾಳ ಅವರು ಚಾಲನೆ ನೀಡಿದರು. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಲೆ ಏರಿಕೆಯ ಸಂಕಷ್ಟಗಳ ನಡುವೆ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಲಿದೆ, ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳಲು ರೇಷನ್ ಕಾರ್ಡಿನ ಮುಖ್ಯಸ್ಥ ಇರುವ ಎಲ್ಲಾ ಮಹಿಳೆಯರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ ಖಾತೆಗೆ ೨ಸಾವಿರ ಹಣ ಜಮಾ ಆಗಲಿದೆ ಎಂದರು. ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಅವರು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಚಾಲನೆ ನೀಡಿದನ್ನು, ರಾಜ್ಯದ ಎಲ್ಲಾ ಗ್ರಾಪಂ ಪುರಸಭೆ, ನಗರಸಭೆ ಮಟ್ಟದಲ್ಲಿ ನೇರ ಪ್ರಸಾರ ಕಾರ್ಯಕ್ರಮ ಮಾಡಿದ್ದು, ಮಹಿಳೆಯರಿಗೆ ಖುಷಿ ತಂದು ಕೊಟ್ಟಿದೆ. ಗ್ರಾಮೀಣ, ನಗರ ಪ್ರದೇಶದ ಎಲ್ಲಾ ಮಹಿಳೆಯರು ಯೋಜನೆಯ ಲಾಭ ಪಡೆದು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಬೇಕೆಂದು ಹೇಳಿದರು. ಪಟ್ಟಣದ ನೂರಾರು ಮಹಿಳೆಯರು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಅರಮನೆ ಸುಧಾ, ತಾಪಂ ಇಒ ಉಮೇಶ, ಸಿಪಿಐ ಬಾಲಚಂದ್ರ ಲಕ್ಕಂ, ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಸಿಡಿಪಿಒ ಅಶೋಕ ಸೇರಿದಂತೆ ಇನ್ನಿತರಿದ್ದರು.

Leave a Reply

Your email address will not be published. Required fields are marked *

error: Content is protected !!