
ಉದಯವಾಹಿನಿ ಯಾದಗಿರಿ: ಜನರ ಆಶೋತ್ತರಗಳಿಗೆ ಸಹಾಯ ಹಸ್ತ ಚಾಚಬೇಕೆಂಬ ನಿಟ್ಟಿನಲ್ಲಿ ಹಾಗೂ ಮಹಿಳೆಯರು ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ಇರುವ ದೃಷ್ಟಿಯಲ್ಲಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ ಎಂದು ಸಣ್ಣಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಅಭಿಪ್ರಾಯಪಟ್ಟರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಹಮ್ಮಿಕೊಂಡ ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನಕ್ಕೆ ದೀಪ ಬೆಳಗಿಸಿ ಹಾಗೂ ಅರ್ಹ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ ಜನರ ಬೇಡಿಕೆಯನ್ನು ಆಲಿಸಿ, ರೈತರ ಜೊತೆ ಮತ್ತು ಎಲ್ಲಾ ವರ್ಗದವರ ಜೊತೆ ಸಂವಾದ ಮಾಡುವ ಮುಖಾಂತರ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಈ ಘೋಷಣೆಗಳನ್ನು ಎಷ್ಟೇ ಕಷ್ಟವಾದರೂ ಜಾರಿಗೆ ತರುತ್ತೇವೆಂದು ಶಪಥ ಮಾಡಿದ್ದೇ
