
ಉದಯವಾಹಿನಿ ಮುದಗಲ್ಲ: ಪಟ್ಟಣದ ಪುರಸಭೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ನುಲಿಯ ಚಂದಯ್ಯ ಜಯಂತಿಯನ್ನು ಆಚರಣೆ ಮಾಡಲಾಯಿತು .ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ ಅವರು ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ನುಲಿಯ ಚಂದಯ್ಯ ಭಾವಚಿತ್ರ ಕ್ಕೆ ಪೂಜೆ ಸಲ್ಲಿಸಿ ಹೂವಿನ ಹಾರ ಹಾಕುವ ಮೂಲಕ ನಮನ ಸಲ್ಲಿಸಿದರು. ನಂತರದ ಮಾತನಾಡಿದ ಪುರಸಭೆ ಯ ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ ಅವರು, ಬ್ರಹ್ಮ ಶ್ರೀ ನಾರಾಯಣಗುರು ಹಾಗೂ ನುಲಿಯ ಚಂದಯ್ಯ ಅವರ ಸಾಮಾಜಿಕ ಕೆಲಸಗಳು ಸಮಾಜಕ್ಕೆ ಮಾದರಿಯಾಗಿವೆ.ಇವರುಗಳ ತತ್ವ ಆದರ್ಶಗಳು ಇಂದಿನ ಯುವಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ ಹಾಗೂ ನೈಮಲ್ಯ ಅಧಿಕಾರಿ ಆರೀಪ್ ಹುನ್ನಿಸಾ ಬೇಗಂ ಹಾಗೂ ಪುರಸಭೆ ಸಿಬ್ಬಂದಿ ಚನಮ್ಮ ದಳವಾಯಿ, ಹಾಗೂ ಸಮಾಜ ಗಣ್ಯರು ಉಪಸ್ಥಿತರಿದ್ದರು..
