ಉದಯವಾಹಿನಿ ಕುಶಾಲನಗರ :-ಮಾನವ ಕುಲದ ಏಕತೆಗಾಗಿ ಮತ್ತು ಸಮ ಸಮಾಜ ನಿರ್ಮಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಅವರು ಶ್ರಮಿಸಿದ್ದಾರೆ ಎಂದು ಸಾಹಿತಿ ಹಾಗೂ ಚಿಂತಕರಾದ ಟಿ.ಪಿ.ರಮೇಶ್ ಅವರು ತಿಳಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಗುರುವಾರ ನಡೆದ ಬ್ರಹ್ಮಶ್ರೀ ನಾರಾಯಣಗುರು ಮತ್ತು ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನಾರಾಯಣಗುರು ಅವರು ಶೋಷಿತ ಸಮಾಜಕ್ಕೆ ಅರಿವಿನ ಬೆಳಕನ್ನು ನೀಡಿದ್ದಾರೆ. ಒಂದೇ ಧರ್ಮ, ಒಂದೇ ದೇವರು ಎಂದು ಸಾರಿದ್ದಾರೆ. ಎಲ್ಲರೂ ಸಮಾಜ ಮುಖಿಯಾಗಿ ಬದುಕಬೇಕು ಎಂಬುದು ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಅವರ ಆಶಯವಾಗಿತ್ತು ಎಂದು ಟಿ.ಪಿ.ರಮೇಶ್ ಅವರು ನುಡಿದರು.ನಾರಾಯಣಗುರು ಅವರು ೧೮೮೮ ರಲ್ಲಿ ತಿರುವಂತಪುರದ ಅರವಿಪುರಂನಿAದ ಜಾಗೃತಿ ಆಂದೋಲನವನ್ನು ಹಮ್ಮಿಕೊಂಡು ದೇವಾಲಯಗಳಿಗೆ ಎಲ್ಲರ ಪ್ರವೇಶಕ್ಕೆ ಅವಕಾಶ ನೀಡಿದರು.ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಹತ್ತಾರು ದೇವಾಲಯಗಳನ್ನು ನಿರ್ಮಿಸಿ ದೇವಾಲಯ ಪ್ರವೇಶಕ್ಕೆ ಎಲ್ಲರಿಗೂ ಅವಕಾಶ ಮಾಡಿದರು ಎಂದರು.
ಮತ ಸುಧಾರಣೆ ಮತ್ತು ಸಮಾಜ ಸುಧಾರಣೆಯ ಯೋಜಿತ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಮಾಡುವುದು ನಾರಾಯಣಗುರು ಅವರ ಉದ್ದೇಶವಾಗಿತ್ತು. ಆ ನಿಟ್ಟಿನಲ್ಲಿ 19೦3 ರಲ್ಲಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್‌ಎನ್‌ಡಿಪಿ) ಅಸ್ತಿತ್ವಕ್ಕೆ ತಂದರು ಎಂದು ಹೇಳಿದರು.ನುಲಿಯ ಚಂದಯ್ಯ ಅವರು ಬಿಜಾಪುರ ಜಿಲ್ಲೆಯ ಶಿವಣಗಿಯಲ್ಲಿ ೧೧೬೦ ರಲ್ಲಿ ಜನಿಸಿದರು. ಇವರ ಅಂಕಿತ ನಾಮ ಚಂದೇಶ್ವರಲಿAಗ. ಹಗ್ಗ ಹೊಸೆದು ಮಾರುವುದು ಇವರ ಕಾಯಕ. ಇವರು ೪೮ ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ. ಕಾಯಕ ನಿಷ್ಠೆ ಮತ್ತು ಜಂಗಮ ದಾಸೋಹ ಗಮರ್ನಾಹವಾಗಿದೆ. ನುಲಿಯ ಚಂದಯ್ಯ ಬಸವಣ್ಣನವರ ಸಮಕಾಲೀನರು ಮತ್ತು ಅವರ ಜೊತೆ ಕೈ ಜೋಡಿಸಿದ ಪ್ರಮುಖ ಶರಣರಲ್ಲಿ ಒಬ್ಬರು ಎಂದು ಟಿ.ಪಿ.ರಮೇಶ್ ಅವರು ತಿಳಿಸಿದರು.ಮಡಿಕೇರಿ ತಾಲ್ಲೂಕು ಬಿಲ್ಲವ ಸಮಾಜದ ಅಧ್ಯಕ್ಷರಾದ ಲೀಲಾವತಿ ಅವರು ಮಾತನಾಡಿ ವಿದ್ಯೆಯಿಂದ ಸ್ವತಂತ್ರವಾಗಿ ಬದುಕಲು ಸಾಧ್ಯ ಎಂಬುದನ್ನು ನಾರಾಯಣಗುರು ಅವರು ಸಾರಿದ್ದಾರೆ ಎಂದರು. ಕುಳುವ ಸಮಾಜದ ಜಿಲ್ಲಾಧ್ಯಕ್ಷರಾದ ಎಚ್.ಪಿ.ಮಹೇಶ್ ಅವರು ಮಾತನಾಡಿ ನುಲಿಯ ಚಂದಯ್ಯ ಅವರ ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು. ಜಿ.ಪ0.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಬ್ರಹ್ಮಶ್ರೀ ನಾರಾಯಣಗುರು ಮತ್ತು ನುಲಿಯ ಚಂದಯ್ಯ ಅವರ ಆದರ್ಶ ಮತ್ತು ಜೀವನದ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಜವರಪ್ಪ . ಸರ್ವೋದಯ ಸಮಿತಿ ಜಿಲ್ಲಾ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ, ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜ್ಜೀರ ಬಿ.ಅಯ್ಯಪ್ಪ, ಇತರರು ಇದ್ದರು.
