ಉದಯವಾಹಿನಿ, ದಾವಣಗೆರೆ : ಕರ್ನಾಟಕದಲ್ಲಿ ಮುಂಗಾರು ಮಳೆ ವಿಫಲವಾಗಿದ್ದು, ಕಾವೇರಿ ಜಲಾನಯನದ ಜಲಾಶಯಗಳು ಭರ್ತಿಯಾಗದೆ ಸಂಕಷ್ಟ ಎದುರಾಗಿದೆ. ಇಂತಹ ಸಮಯದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ವಿಶ್ವ ಕರ್ನಾಟಕ ‌ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಈ ವೇಳೆ ಪ್ರತಿಭಟನೆ ಉದ್ದೇಶಿಸಿ ವಿಕರವೇ ರಾಜ್ಯಾಧ್ಯಕ್ಷ ಕೆ.ಜಿ‌.ಯಲ್ಲಪ್ಪ ಮಾತನಾಡಿಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಯದೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನವಿದೆ ಎಂಬ ಕಾರಣ ಮುಂದಿಟ್ಟುಕೊಂಡು ತಮಿಳುನಾಡಿಗೆ ನಿತ್ಯ 5000 ಕ್ಯೂಸೆಕ್ಸ್‌ ನೀರು ಹರಿಸುತ್ತಿರುವುದು ಖಂಡನೀಯ, ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಮರುಪರಿಶೀಲಿಸುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಮೊರೆ ಹೋಗುವುದನ್ನು ಬಿಟ್ಟು ತಮಿಳುನಾಡಿಗೆ ನೀರು ಬಿಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಳೆ ಕೊರತೆಯಾದ ಈ ವರ್ಷದಲ್ಲಿ ನೆರವಿಗೆ ಬರುವಂತೆ ಹಾಗೂ ಸಂಕಷ್ಟದ ಸೂತ್ರವನ್ನು ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಿತ್ತು.

Leave a Reply

Your email address will not be published. Required fields are marked *

error: Content is protected !!