ಉದಯವಾಹಿನಿ, ಕುಶಾಲನಗರ :ಗಾಂಧಿ ಭವನ ನಿರ್ವಹಣೆ ಹಾಗೂ ಗೌರವ ಸಲಹಾ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಗಾಂಧಿ ಭವನದಲ್ಲಿ ನಡೆಯಿತು. ಗಾಂಧಿ ಭವನವನ್ನು ಗಾಂಧೀಜಿ ಅವರ ಚಿಂತನೆ, ತತ್ವ ಹಾಗೂ ಅಧ್ಯಯನಕ್ಕಾಗಿಯೇ ಮೀಸಲಿಡಬೇಕಿದ್ದು, ಆ ನಿಟ್ಟಿನಲ್ಲಿ ಕಾರ್ಯಕ್ರಮಗಳಿಗೆ ಅವಕಾಶ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳ ಸರ್ಕಾರದ ಅಧಿಕೃತ ಕಾರ್ಯಕ್ರಮಗಳು ಹಾಗೂ ಶಾಲಾ-ಕಾಲೇಜುಗಳ ಕಾರ್ಯಕ್ರಮ ಆಯೋಜನೆಗೆ ಅವಕಾಶ ಕಲ್ಪಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ‘ಆ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯಕ್ರಮಗಳಿಗೆ ಒಂದು ದಿನಕ್ಕೆ ೩ ಸಾವಿರ ರೂ. ಹಾಗೂ ಶಾಲಾ ಕಾಲೇಜು ಕಾರ್ಯಕ್ರಮಗಳಿಗೆ ೨ ಸಾವಿರ ರೂ. ನಿಗದಿ ಮಾಡಲು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.’
ಸರ್ಕಾರಿ ಅಥವಾ ಶಾಲಾ-ಕಾಲೇಜು ಕಾರ್ಯಕ್ರಮ ಆಯೋಜನೆ ಸಂಬAಧ ಮೂರು ದಿನಕ್ಕಿಂತ ಹೆಚ್ಚು ನೀಡದಿರುವುದು, ಜೊತೆಗೆ ಬೆಳಗ್ಗೆ ೮ ರಿಂದ ಸಂಜೆ ೬ ಗಂಟೆ ವರೆಗೆ ಮಾತ್ರ ಕಾರ್ಯಕ್ರಮ ಆಯೋಜನೆಗೆ ಅವಕಾಶ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಗಾಂಧಿ ಭವನದಲ್ಲಿ ಸ್ವಚ್ಛತೆ ಮತ್ತು ಶುಚಿತ್ವಕ್ಕೆ ಆದ್ಯತೆ ನೀಡಬೇಕಿದೆ. ಆ ನಿಟ್ಟಿನಲ್ಲಿ ತುರ್ತಾಗಿ ಹೊರಗುತ್ತಿಗೆಯಡಿ ಒಬ್ಬ ನೌಕರರನ್ನು ನಿಯೋಜಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರಲ್ಲಿ ಮನವಿ ಮಾಡಿದರು.
ಇದಕ್ಕೆ ಜಿಲ್ಲಾಧಿಕಾರಿ ಅವರು ನಿಯಮಾನುಸಾರ ಮೂರು ತಿಂಗಳಿಗೊಮ್ಮೆಯAತೆ ಕೊಟೇಷನ್ ಮಾದರಿಯಲ್ಲಿ ಹೊರಗುತ್ತಿಗೆ ಸಿಬ್ಬಂದಿಯನ್ನು ನೇಮಕ ಮಾಡಲು ಅನುಮತಿ ನೀಡಿದರು ಈಗಾಗಲೇ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಾರ್ಯಪಾಲಕ ಅಭಿಯಂತರರು ಲೋಕೋಪಯೋಗಿ ಇಲಾಖೆ, ಪೌರಾಯುಕ್ತರು, ನಗರಸಭೆ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರು ಇವರನ್ನು ಒಳಗೊಂಡ ‘ಕಾರ್ಯ ಅನುಷ್ಠಾನ ಸಮಿತಿ’ಯನ್ನು ಈಗಾಗಲೇ ೨೦೧೮ ರ ಡಿಸೆಂಬರ್, ೩೧ ರಂದು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ವಾರ್ತಾಧಿಕಾರಿ ಚಿನ್ನಸ್ವಾಮಿ ತಂದರು.
ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಪೊಲೀಸ್ ಇಲಾಖೆಯ ಇನ್ಸ್ಪೆಕ್ಟರ್ ಐ.ಪಿ.ಮೇದಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣ ಸಮನ್ವಯಾಧಿಕಾರಿ ಹರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಯಂತಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಅವರು ಹಲವು ಸಲಹೆ ನೀಡಿದರು.

Leave a Reply

Your email address will not be published. Required fields are marked *

error: Content is protected !!