
ಉದಯವಾಹಿನಿ ಕುಶಾಲನಗರ: ಪ್ರಧಾನ ಮಂತ್ರಿ ಪೋಷಣ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಇಂದು ಬೆಳಿಗ್ಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹೆಬ್ಬಾಲೆಯಲ್ಲಿ ಶಾಲಾ ಮಕ್ಕಳಿಗೆ ಆಹಾರ ಧಾನ್ಯಗಳ ಬಗ್ಗೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಧ್ಯಾಹ್ನದ ಉಪಹಾರ ಯೋಜನೆಯಲ್ಲಿ ಬಳಸುವ ಆಹಾರಧಾನ್ಯಗಳು ತರಕಾರಿಗಳು ಹಣ್ಣುಗಳು ಸೊಪ್ಪು ಜೇನುತುಪ್ಪ ತುಪ್ಪ ಹಾಲು ತೆಂಗಿನಕಾಯಿ ಇನ್ನು ಮುಂತಾದ ವಿವಿಧ ದಿನನಿತ್ಯ ಬಳಸುವ ಆಹಾರ ಪದಾರ್ಥಗಳನ್ನು ಇಟ್ಟು ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ವಿವರಣೆಯನ್ನು ಕಾರ್ಯಕ್ರಮವನ್ನು ಹಿರಿಯ ಶಿಕ್ಷಕರಾದ ಹೆಚ್ ಈ ರಮೇಶರವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಮುಖ್ಯ ಶಿಕ್ಷಕರಾದ ಎಚ್ ಎಂ ವೆಂಕಟೇಶ್ವರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮದ ಉಸ್ತುವಾರಿಯನ್ನು ಶಿಕ್ಷಕಿಯರಾದ ಶ್ರೀಮತಿ ಸಿಎಮ್ ಬಬಿತಾ ಮತ್ತು ಶ್ರೀಮತಿ ಪುಷ್ಪಾವತಿ ಅವರು ವಹಿಸಿದ್ದರು ಕಾರ್ಯಕ್ರಮದಲ್ಲಿ ಆಹಾರ ಪದಾರ್ಥಗಳಿಂದ ದೊರೆಯುವ ಪೋಷಕಾಂಶಗಳ ಬಗ್ಗೆ ಶಿಕ್ಷಕಿಯರಾದ ಸಿಎಸ್ ಜಾನಕಿ ರವರು ಪ್ರಾತ್ಯಕ್ಷಿಕೆ ಮೂಲಕ ಹಂತ ಹಂತವಾಗಿ ಮಕ್ಕಳಿಗೆ ಮಾಹಿತಿ ನೀಡಿದರು.
ಮಕ್ಕಳು ಕಾರ್ಯಕ್ರಮದಲ್ಲಿ ಸಂಭ್ರಮಿಸಿದರು.
