
ಉದಯವಾಹಿನಿ ದೇವರಹಿಪ್ಪರಗಿ:ತಾಲೂಕಿನ ತಿಳಗೂಳ ಮುನೀಶ್ವರ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸತ್ಯವ್ವ ಪರಶುರಾಮ ದೊಡಮನಿಯವರು ಜ್ಯೋತಿ ಬೆಳಗಿಸುವದರ ಮೂಲಕ ಕ್ರೀಡೆಗೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಲೆಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಎನ್. ಯಾಳವಾರ ವಹಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರಾದ ಸಿದ್ದು ಬುಳ್ಳಾ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಿಯಾಂಕಾ ಚಿಗರಿ, ಯಮನಪ್ಪ ಬೋವಿ, ಪರಶುರಾಮ ಬುಯ್ಯಾರ, ಸಿ ಆರ್ ಪಿ ಸಂಜೀವಕುಮಾರ ರಾಠೋಡ, ಎಲ್ಲಾ ಶಾಲೆಯ ದೈಹಿಕ ಶಿಕ್ಷಕರು,ಊರಿನ ಪ್ರಮುಖರು, ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
